'ಲೋಕ' ಸಮರದ `ಜೆಡಿಎಸ್' ಅಭ್ಯರ್ಥಿಗಳ ಪಟ್ಟಿ ಬಿಡುಗಡೆ..?

15 Mar 2019 5:16 PM |
3390 Report

ಈಗಾಗಲೇ ಲೋಕ ಸಮರ ಕ್ಕೆ ದಿನಾಂಕ ಫಿಕ್ಸ್ ಆಗಿದೆ..ಇದರ ನಡುವೆ ನೀತಿ ಸಂಹಿತೆ ಕೂಡ ಜಾರಿಯಲ್ಲಿದೆ..ಅಂದುಕೊಂಡಂತೆ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ 8 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಚುನಾವಣಾ ಪೂರ್ವ ಸಿದ್ಧತಾ ಸಭೆ ನಡೆದಿದ್ದು, ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ

ಈಗಾಗಲೇ ಹಾಸನಕ್ಕೆ ಪ್ರಜ್ವಲ್, ಮಂಡ್ಯಗೆ ನಿಖಿಲ್ ಆಯ್ಕೆಯಾಗಿದ್ದು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಕ್ಷೇತ್ರಗಳಿಗೆ ಬಹುತೇಕ ಫೈನಲ್ ಆಗಿದೆ. ಚಿಕ್ಕಮಗಳೂರು, ವಿಜಯಪುರ ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳ ಆಯ್ಕೆ ನಡೆಯುತ್ತಿದೆನ ಅಭ್ಯರ್ಥಿಗಳೆನೆಲ್ಲಾ ಇಂದು ಅಧಿಕೃತವಾಗಿ ಪ್ರಕಟ ಮಾಡಲಿದ್ದಾರೆ ಎನ್ನಲಾಗಿದೆ. ತುಮಕೂರು ಮತ್ತು ಬೆಂಗಳೂರು ಉತ್ತರ ಪೈಕಿ ಒಂದು ಕಡೆ ದೇವೇಗೌಡರ ಸ್ಪರ್ಧೆ ಖಚಿತವಾಗಿದೆ. ದೇವೇಗೌಡರು ಆಯ್ಕೆ ಮಾಡಿಕೊಂಡ ಬಳಿಕ ಉಳಿಯುವ ಒಂದು ಕ್ಷೇತ್ರಕ್ಕೆ ಯಾರು ಅಭ್ಯರ್ಥಿಯಾಗಲಿದ್ದಾರೆ ಎಂಬ ಕುತೂಹಲಕ್ಕೆ ಇಂದು ಉತ್ತರ ಸಿಗುವ ನಿರೀಕ್ಷೆ ಇದೆ. ಒಟ್ಟಿನಲ್ಲಿ ದೇವೆಗೌಡರು ಎಲ್ಲಿಂದ ಸ್ಪರ್ಧೆ ಮಾಡುತ್ತಾರೆ ಎಂಬುದು ಮಾತ್ರ ಗೊತ್ತಿಲ್ಲ..

Edited By

hdk fans

Reported By

hdk fans

Comments