ಎಚ್.ಡಿ.ದೇವೇಗೌಡರ ಚುನಾವಣೆಯ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸಿಎಂ..!!

22 Mar 2019 12:57 PM |
1127 Report

ಈಗಾಗಲೇ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಬಲ ಅಭ್ಯರ್ಥಿಗಳನ್ನು ಅಖಾಡಕ್ಕೆ ಇಳಿಸುವ ಬಗ್ಗೆ ಚಿಂತನೆಯನ್ನು ನಡೆಸುತ್ತಿದ್ದಾರೆ. ಎಲ್ಲಾ ಪಕ್ಷದವರು ಕೂಡ ಯಾವ ಪಕ್ಷಕ್ಕೆ ಯಾವ ಅಭ್ಯರ್ಥಿ ಸೂಕ್ತ ಎಂಬುದನ್ನು ಅರಿತು ಅಭ್ಯರ್ಥಿ ಆಯ್ಕೆ ನಡೆಸುತ್ತಿದ್ದಾರೆ.. ಆದರೆ ಮಾಜಿ ಪ್ರಧಾನಿ ದೇವೆಗೌಡರು ಯಾವ ಕ್ಷೇತ್ರದಿಂದ ಅಖಾಡಕ್ಕೆ ಇಳಿಯುತ್ತಾರೆ ಎಂಬುದೆ ಒಂದು ದೊಡ್ಡ ಗೊಂದಲದ ಪ್ರಶ್ನೆಯಾಗಿ ಬಿಟ್ಟಿದೆ.. ಇದರ ನಡುವೆ ಕುಮಾರಸ್ವಾಮಿ ಶಾಕಿಂಗ್ ಹೇಳಿಕೆಯೊಂದನ್ನು ಕೊಟ್ಟಿದ್ದಾರೆ.

ಲೋಕಸಭೆ ಚುನಾವಣೆಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸ್ಪರ್ಧಿಸಬೇಕೋ ಬೇಡವೋ ಎಂಬ ಅನುಮಾನದಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಪದ್ಮನಾಭನಗರದ ನಿವಾಸದಲ್ಲಿ ದೇವೇಗೌಡರ ಭೇಟಿ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಕುಮಾರಸ್ವಾಮಿಯವರು  ಬೆಂಗಳೂರು ಉತ್ತರ ಮತ್ತು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ತೀವ್ರ ಒತ್ತಡ ಇದೆ. ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬುದು ಇನ್ನೂ ಅಂತಿಮಗೊಂಡಿಲ್ಲ. ಎರಡು ಕ್ಷೇತ್ರದಿಂದ ಒತ್ತಡ ಹೆಚ್ಚಿರುವ ಕಾರಣ ಸ್ಪರ್ಧಿಸಬೇಕೋ ಬೇಡವೋ ಎಂಬ ಅನುಮಾನದಲ್ಲಿಯೂ ಇದ್ದಾರೆ ಎಂದು ಮಾರ್ಮಿಕವಾಗಿ ತಿಳಿಸಿದರು.  ಒಟ್ಟಾರೆಯಾಗಿ ಒಂದು ವೇಳೆ ಗೌಡರು ಅಖಾಡಕ್ಕೆ ಇಳಿದರೆ ಇದೇ ಅವರ ಕೊನೆಯ ಸ್ಪರ್ಧೆಯಾಗಿರುತ್ತದೆ ಎಂದಿದ್ದರು.. ಆದರೆ ಮುಂದೆ ಏನಾಗುತ್ತದೋ ಕಾದು ನೋಡಬೇಕಾಗುತ್ತದೆ.

Edited By

hdk fans

Reported By

hdk fans

Comments