ಕಸಬಾ ಹೋಬಳಿಯ ಬಿಜೆಪಿ ಕಾರ್ಯಕರ್ತರ ಸಮಾವೇಶ

02 Apr 2019 6:36 AM |
160 Report

ದಿನಾಂಕ 03-04-2019 ಬುಧವಾರ ದಂದು ಬೆಳಿಗ್ಗೆ 9:30 ಗಂಟೆಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕಸಬಾ ಹೋಬಳಿಯ ರಘುನಾಥಪುರ ಗ್ರಾಮದಲ್ಲಿರುವ ಎನ್.ಎಸ್.ಕನ್ವೆಂಷನ್ ಹಾಲ್ ನಲ್ಲಿ ಕಸಬಾ ಹೋಬಳಿಯ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕರ್ತರ ಸಮಾವೇಶಕ್ಕೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಬಿ.ಎನ್.ಬಚ್ಚೇಗೌಡ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಚಾಲಕ ಹಾಗೂ ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್, ದೊಡ್ಡಬಳ್ಳಾಪುರದ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಮುಖ್ಯ ಅತಿಥಿಗಳಾಗಿ ಕಾರ್ಯಕರ್ತರ ಸಮಾವೇಶಕ್ಕೆ ಆಗಮಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಕಸಬಾ ಹೋಬಳಿಯ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ವಿವಿಧ ಮೋರ್ಚಾದ ಎಲ್ಲಾ ಅಧ್ಯಕ್ಷರು, ಕಾರ್ಯದರ್ಶಿಗಳು, ಬೂತ್ ಮಟ್ಟದ ಎಲ್ಲಾ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಬೂತ್ ನ ಎಲ್ಲಾ ಸದಸ್ಯರು ಹಾಗೂ ಬಿಜೆಪಿ ಪಕ್ಷದ ನಿಷ್ಟಾವಂತ ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಎಚ್.ಎಸ್. ಶಿವಶಂಕರ್ ಕೋರಿದ್ದಾರೆ.

Edited By

Ramesh

Reported By

Ramesh

Comments