ವಿವಿಧ ಗ್ರಾಮಗಳಲ್ಲಿ ಬಿಜೆಪಿ ಮುಖಂಡರಿಂದ ಮತಯಾಚನೆ

13 Apr 2019 7:16 AM |
254 Report

ದಿನಾಂಕ 18/04/2018 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಪರವಾಗಿ ರಾಜ್ಯ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಶರತ್ ಬಚ್ಚೇಗೌಡ ದೊಡ್ಡಬಳ್ಳಾಪುರ ನಗರದ ಕೋರ್ಟ್ ಸಂಕೀರ್ಣದಲ್ಲಿ ವಕೀಲರು ಹಾಗೂ ಸಾರ್ವಜನಿಕರ ಬಳಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡಿಕೊಂಡರು, ನಂತರ ವಿವಿಧ ಗ್ರಾಮಗಳಿಗೆ ತೆರಳಿದ ಮುಖಂಡರು ಕೊಡಿಗೇಹಳ್ಳಿ, ತೂಬಗೆರೆ, ರಾಜಘಟ್ಟ, ಕಂಟನಕುಂಟೆ, ಕೊನಘಟ್ಟ, ಬಾಶೆಟ್ಟಿಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಮತಯಾಚನೆ ಮಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ, ತಾಲ್ಲೂಕು ಅಧ್ಯಕ್ಷ ನಾರಾಯಣಸ್ವಾಮಿ, ಯುವ ಮೋರ್ಚ ಅಧ್ಯಕ್ಷ ಶಿವಶಂಕರ್, ಉಪಾಧ್ಯಕ್ಷ ಶಿವು, ಕೃಷ್ಣನಾಗು, ವಕೀಲ ರವಿ ಮಾವಿನಕುಂಟೆ, ಬಿ.ಸಿ.ಸತ್ಯನಾರಾಯಣ್, ದೇವರಾಜ್, ಪುಷ್ಪಾ ಶಿವಶಂಕರ್, ಟಿ.ವಿ.ಲಕ್ಷ್ಮೀನಾರಾಯಣ್ ಮತ್ತಿತರರು ಹಾಜರಿದ್ದರು.

Edited By

Ramesh

Reported By

Ramesh

Comments