ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜಯಂತಿ ಆಚರಣೆ

15 Apr 2019 7:41 AM |
84 Report

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜಯಂತಿಯನ್ನು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರ ಮೂಲಕ ಆಚರಿಸಲಾಯಿತು. ನಗರ ಬಿಜೆಪಿ ಅಧ್ಯಕ್ಷ ಕೆ.ಎಚ್.ರಂಗರಾಜ್, ನಗರ ಪ್ರಧಾನ ಕಾರ್ಯದರ್ಶಿ ಬಿ.ಜಿ.ಶ್ರೀನಿವಾಸ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಮಹದೇವ್, ಯುವ ಮೋರ್ಚ ಅಧ್ಯಕ್ಷ ಶಿವಶಂಕರ್, ಉಪಾಧ್ಯಕ್ಷ ಶಿವು, ಮಹಿಳಾ ಮೋರ್ಚ ಅಧ್ಯಕ್ಷೆ ವತ್ಸಲ, ಕಾರ್ಯದರ್ಶಿ ದಾಕ್ಷಾಯಿಣಿ, ಖಜಾಂಚಿ ಕಮಲ ಶ್ರೀನಿವಾಸ್, ನಗರ ಅಧ್ಯಕ್ಷೆ ಗಿರಿಜ, ಡಾ.ನಾರಾಯಣ್, ಸದಾಶಿವು,ಗೋಪಿ ಮತ್ತಿತರರು ಭಾಗವಹಿಸಿದ್ದರು.

Edited By

Ramesh

Reported By

Ramesh

Comments