ಕುಮಾರಸ್ವಾಮಿ ರಾಜೀನಾಮೆಗೆ ಕ್ಷಣಗಣನೆ? ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಭವಿಷ್ಯ

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಪರ ವಹಿಸಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ರೋಷನ್ ಬೇಗ್ ಹೇಳಿದ್ದರಲ್ಲಿ ತಪ್ಪೇನಿದೆ. ಸಿದ್ದರಾಮಯ್ಯ ಒಬ್ಬ ದುರಂಹಕಾರಿ. ಸತ್ಯವನ್ನು ಬಹಳ ದಿನ ಮುಚ್ಚಿಡಲು ಸಾಧ್ಯವಿಲ್ಲ. ಎಚ್.ಡಿ.ಕುಮಾರಸ್ವಾಮಿ ಗುರುವಾರ ಸಂಜೆಯವರೆಗೆ ಮಾತ್ರ ಮುಖ್ಯಮಂತ್ರಿಯಾಗಿರುತ್ತಾರೆ.... ಹೆಚ್ಚು ಎಂದರೆ ಶುಕ್ರವಾರ ಬೆಳಗ್ಗೆವರಗೆ ಮಾತ್ರ, ಅವರೇ ರಾಜೀನಾಮೆ ನೀಡಲಿದ್ದಾರೆ ಎಂದು ಭವಿಷ್ಯ ನುಡಿದರು.
ಶೇಕಡಾ ನೂರಕ್ಕೆ ನೂರರಷ್ಟು ಕುಮಾರಸ್ವಾಮಿ ಅಧಿಕಾರ ಕಳೆದುಕೊಳ್ಳುತ್ತಾರೆ. ಹೊಸ ಸರ್ಕಾರ ರಚನೆಗೆ ನಾವು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಳೆದೊಂದು ವರ್ಷದಿಂದ ಮೈತ್ರಿ ಸರ್ಕಾರ ಇರುವುದಿಲ್ಲ ಅಂತಾನೇ ಹೇಳುತ್ತಾ ಬಂದಿದ್ದಾರೆ. ಆದ್ರೆ ಇದೀಗ ರಾಜ್ಯ ಬಿಜೆಪಿ ಸರ್ಕಾರ ರಚೆನೆ ಮಾಡುವ ಆತ್ಮವಿಶ್ವಾಸದಲ್ಲಿದೆ. ಈ ಬಗ್ಗೆ ಬಿಜೆಪಿ ನಾಯರು ಘಂಟಾಘೋಷವಾಗಿ ಹೇಳುತ್ತಿದ್ದಾರೆ.
Comments